ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಕಲ್ಪಿಸಲಾಗಿರುವ ಮೂಲಸೌಕರ್ಯ, ಆಸನ ವ್ಯವಸ್ಥೆ, ಭದ್ರತಾ ಕ್ರಮಗಳು, ಕುಡಿಯುವ ನೀರು, ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಪರೀಕ್ಷೆಯು ಸುಸೂತ್ರವಾಗಿ, ಪಾರದರ್ಶಕವಾಗಿ ಹಾಗೂ ಯಾವುದೇ ಲೋಪದೋಷಗಳಿಲ್ಲದೆ ನಡೆಯುವಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್, ಅಪರ ಜಿಲ್ಲಾಧಿಕಾರಿ ಸೈಯೀದಾ ಆಯಿಷಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!