ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

 

ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಇಂದು ಮುಂಜಾನೆ ನಡೆದಿದೆ.

ದೊಡ್ಡಬಳ್ಳಾಪುರದಿಂದ ಹೊಸಹಳ್ಳಿ ಕಡೆಗೆ ಸಿಮೆಂಟ್ ಮೂಟೆಗಳನ್ನು ಹೊತ್ತು ತೆರಳುತ್ತಿದ್ದ ವೇಳೆ ಮಾರ್ಗಮಧ್ಯದ ಕಡಿದಾದ ತಿರುವಿನಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ.

ಅಪಘಾತದ ರಭಸಕ್ಕೆ ಲಾರಿ ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿದ್ದ ಸಿಮೆಂಟ್ ಮೂಟೆಗಳೆಲ್ಲವೂ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಲಾರಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ದೇವನಹಳ್ಳಿ ಮೂಲದ ಮಧು ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಹೊಸಹಳ್ಳಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!