ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ


ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ ‘ವಿಬಿ-ಜಿ ರಾಮ್ ಜಿ’ ಯೋಜನೆಯು ಗ್ರಾಮಸ್ಥರಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನು ಪಡೆದುಕೊಂಡು ಆರ್ಥಿಕವಾಗಿ ಅಭಿವೃದ್ಧಿ ಪಡೆದುಕೊಳ್ಳಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಲಿಂಗಯ್ಯ ಕರೆ ನೀಡಿದರು.

ತಾಲ್ಲೂಕಿನ ದಸೂಡಿ ಗ್ರಾಮದ ಸಮೀಪ ಬಸ್ ನಿಲ್ದಾಣದಲ್ಲಿ ಕರಪತ್ರಗಳನ್ನು ನೀಡುವ ಮೂಲಕ ಬೀದಿನಾಟಕ ಮತ್ತು “ಜಾಬ್ ಕಾರ್ಡ್ ಮೇಳ” ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಸೆಪ್ಟಂಬರ್ 15 ರವರೆಗೆ ಉದ್ಯೋಗ ಚೀಟಿ ಇಲ್ಲದಾ ಎಲ್ಲಾ ರೈತರು ಮತ್ತು ಕೂಲಿಕಾರರು ಹಾಗೂ ಅರ್ಹ ಗ್ರಾಮೀಣ ಕುಟುಂಬಗಳಿಗೆ ಸ್ಥಳದಲ್ಲೇ ಪರಿಶೀಲಿಸಿ ಹೊಸ ರೋಜ್ಗಾರ್ ಗ್ಯಾರಂಟಿ ಕಾರ್ಡ್ ಗಳನ್ನು ನೀಡಲಾಗುವುದು. ಅರ್ಹ ಫಲಾನುಭವಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಉದ್ಯೋಗ ಚೀಟಿ ಪಡೆಯಬಹುದು ತಪ್ಪದೇ ಅರ್ಹರು ಸೌಲಭ್ಯಗಳನ್ನು ಪಡೆದುಕೊಳ್ಳಿ ಎಂದು ಮನವಿ ಮಾಡಿದರು.

ಕಾರ್ಯದರ್ಶಿಗಳಾದ ಮಧುಸೂದನ್ ರವರು ಮಾತನಾಡಿ, ವಿಬಿ – ಜಿ ರಾಮ್ ಜಿ ಯೋಜನೆ ಗ್ರಾಮೀಣಾಭಿವೃದ್ಧಿಗೊಳಿಸಬೇಕು ಅದೇ ರೀತಿ ರೈತರ ಉದ್ಧಾರಕೆಂದು ಜಾರಿಯಾಗಿರುವ ಯೋಜನೆ ಎಲ್ಲರೂ ಉತ್ತಮ ರೀತಿಯಲ್ಲಿ ಅರ್ಹರು ಸದುಪಯೋಗಗಳನ್ನು ಪಡೆಯಿರಿ ಎಂದರು. ಯೋಜನೆಯಡಿ ವಾರ್ಷಿಕ ಉದ್ಯೋಗದ ಅವಧಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ದಿನದ ಕೂಲಿ ಮೊತ್ತವನ್ನೂ 370 ರೂ. ರಿಂದ 382 ರೂ.ಗೆ ಹೆಚ್ಚಿಸಲಾಗಿದೆ ಎಂದರು.

ಈ ವೇಳೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮುದ್ದಲಿಂಗಯ್ಯ, ಕಾರ್ಯದರ್ಶಿ ಮಧುಸೂದನ್ ರವರು, ತಾಂತ್ರಿಕ ಸಹಾಯಕರಾದ ಹೊನ್ನೇಶ್ ಬಿ. ಎಸ್ , ಡಿಇಒ ಮದನ್, ಕರಾವಸೂಲಿಕಾರರು, ನೀರು ವಿತರಕರು, ಸಾರ್ವಜನಿಕರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!