
ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ದೊಡ್ಡಬಳ್ಳಾಪುರ ನಗರದ 66/11 ಕೆವಿ ಡಿ.ಕಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ DF10–ವಸವಿ ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಫೀಡರ್‌ಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಪಾಲನಜೋಗಿಹಳ್ಳಿ, ಕುವೆಂಪುನಗರ, ಟಿಬಿ ಸರ್ಕಲ್, ಟಿಬಿ ನಾರಾಯಣಪ್ಪ ಬಡಾವಣೆ, ಮಲ್ಲತ್ತಹಳ್ಳಿ, ಗಂಗಾಧರಪುರ, ಬಸವಭವನ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.