ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ -2023: ಚಾಂಪಿಯನ್ ಪಟ್ಟ ಅಲಂಕರಿಸಿ ಇತಿಹಾಸ ಸೃಷ್ಟಿಸಿದ ರಾಂಕಿರೆಡ್ಡಿ-ಚಿರಾಗ್ ಜೋಡಿ

ಇಂಡೋನೇಷ್ಯಾ ಓಪನ್‌ ಬ್ಯಾಡ್ಮಿಂಟನ್‌ -2023 ಟೂರ್ನಿಯ ಚಾಂಪಿಯನ್​ ಪಟ್ಟ ಅಲಂಕರಿಸಿದ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಹಾಗೂ ಚಿರಾಗ್‌ ಶೆಟ್ಟಿ.

ಆ ಮೂಲಕ ಬ್ಯಾಡ್ಮಿಂಟನ್‌ನಲ್ಲಿ ಇತಿಹಾಸ ಸೃಷ್ಟಿಸಿದ ಭಾರತದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ.

ಶನಿವಾರ ಫೈನಲ್​ಗೆ ಲಗ್ಗೆ ಇಡುವ ಮೂಲಕ ವರ್ಲ್ಡ್ ಟೂರ್‌ ಸೂಪರ್‌-1000ನಲ್ಲಿ ಈ ಸಾಧನೆಗೈದು, ಇದೀಗ ಚೊಚ್ಚಲ ಪ್ರಶಸ್ತಿ ಗೆದ್ದು ಚಾಂಪಿಯನ್​ ಪಟ್ಟ ಅಲಂಕರಿಸಿದ್ದಾರೆ.

ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಾತ್ವಿಕ್-ಚಿರಾಗ್ 21-17, 21-18 ಸೆಟ್ ಗಳ ಮೂಲಕ ಮಲೇಷ್ಯಾದ ಆರೋನ್ ಚಿಯಾ ಮತ್ತು ವೂಯಿ ಯಿಕ್ ಸೊಹ್ ಜೋಡಿಯನ್ನು ಸೋಲಿಸಿದರು. ಇದರೊಂದಿಗೆ ಸೂಪರ್-1000 ಟೂರ್ನಿ ಗೆದ್ದ ಮೊದಲ ಭಾರತೀಯ ಜೋಡಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

Leave a Reply

Your email address will not be published. Required fields are marked *