ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಪೌರಸಭೆಗಳ ಅಧಿನಿಯಮ, 1964ರ ಪ್ರಕರಣ 352(1)(ಬಿ)ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶ್ಯಾಮಲಮ್ಮ‌ ಲಕ್ಷ್ಮಿಪತಿ‌ ಜಿ, ಬಿ.ಕೆ. ಮುನಿರಾಜು ಹಾಗೂ ನರಸಿಂಹಮೂರ್ತಿ ಬಿ.ಎಂ. ಅವರನ್ನು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಂಜುನಾಥ್ ಅಧಿಸೂಚನೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!