ಎಸಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಚೇರಿಯ ಕೆಲ ಅಧಿಕಾರಿಗಳು, ಸಿಬ್ಬಂದಿ ನಾಪತ್ತೆ: ಅಧಿಕಾರಿಗಳಿಗಾಗಿ ಕಾಯುತ್ತಿರುವ ಸಾರ್ವಜನಿಕರು

ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಕಚೇರಿಯ ಒಂದಿಬ್ಬರು ಸಿಬ್ಬಂದಿ ಹೊರತುಪಡಿಸಿ ಬಹುತೇಕ ಅಧಿಕಾರಿಗಳು ಹಾಗೂ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

ವಿವಿಧ ಕೆಲಸಗಳಿಗಾಗಿ ಕಚೇರಿಗೆ ಆಗಮಿಸಿದ್ದ ಸಾರ್ವಜನಿಕರು ಅಧಿಕಾರಿಗಳಿಗಾಗಿ ಕಾಯುವಂತಾಗಿದೆ.

ಇದೇ ವೇಳೆ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿಯೂ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ದಾಳಿ ಹಾಗೂ ಪರಿಶೀಲನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!