ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 32.97 ಲಕ್ಷ ಎಂದು ಅಂದಾಜಿಸಲಾಗಿದೆ.

ಆ.07-10-2026: ಬ್ಯಾಂಕಾಕ್‌ನಿಂದ ಬಂದ ಮತ್ತೊಬ್ಬ ಪ್ರಯಾಣಿಕನ ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 930 ಗ್ರಾಂ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದರ ಮೌಲ್ಯ 32.55 ಲಕ್ಷ ಎಂದು ಅಂದಾಜಿಸಲಾಗಿದೆ.

ಇ.08-10-2026: ಥಾಯ್ಲೆಂಡ್‌ನ ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕನಿಂದ ಕಸ್ಟಮ್ಸ್ ತಪಾಸಣೆಯ ವೇಳೆ 1.978 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ 69.23 ಲಕ್ಷವಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಕಣ್ತಪ್ಪಿಸಲು ಗಾಂಜಾವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.

ಈ.08-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನಿಂದ 1.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ 39.20 ಲಕ್ಷ ಎಂದು ಅಂದಾಜಿಸಲಾಗಿದೆ. ಕಸ್ಟಮ್ಸ್ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಗಾಂಜಾವನ್ನು ಅಡಗಿಸಿಟ್ಟಿರುವುದು ಪತ್ತೆಯಾಗಿದೆ.

ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ಹೈಡ್ರೋಪೋನಿಕ್ ಗಾಂಜಾದ ಒಟ್ಟು ತೂಕ 4.97 ಕೆ.ಜಿ. ಆಗಿದ್ದು, ಒಟ್ಟು ಅಂದಾಜು ಮೌಲ್ಯ 1.73 ಕೋಟಿ ಆಗಿದೆ.

ಈ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಿಗಳನ್ನು ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ಅಕ್ರಮ ಸಾಗಣೆ ತಡೆ ಕಾಯ್ದೆ (NDPS Act), 1985ರ ಅಡಿಯಲ್ಲಿ ಬಂಧಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!