ದೊಡ್ಡಬಳ್ಳಾಪುರ ತಾಲೂಕಿನ ಮುಕ್ಕೇನಹಳ್ಳಿ ಗ್ರಾಮದ ಶ್ರೀವೇಣು ಗೋಪಾಲಸ್ವಾಮಿ ದೇವಾಲಯದ ಹುಂಡಿ ಸಮೇತ ಕಳ್ಳರು ಪರಾರಿಯಾಗಿರುವ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.
ಹುಂಡಿಯಲ್ಲಿ ಸುಮಾರು 30 ಸಾವಿರಕ್ಕೂ ಹೆಚ್ಚು ಹಣ ಇತ್ತು ಎಂದು ಗ್ರಾಮಸ್ಥರು ಅಂದಾಜಿಸಿದ್ದಾರೆ. ಈ ಕುರಿತು ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ತಾಲೂಕಿನ ದೇವಾಲಯಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದನ್ನು ನಿಯಂತ್ರಣ ಮಾಡುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿರುವ ಸಾರ್ವಜನಿಕರು.