ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿ: 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತ ಪ್ರಶಾಂತ!

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಅಂಗವಾಗಿ ಅರಮನೆ ಆವರಣದಲ್ಲಿ ನಡೆದ ಐತಿಹಾಸಿಕ ಜಂಬೂಸವಾರಿಗೆ ಶುಭ ಮೀನ ಲಗ್ನದಲ್ಲಿ ಚಾಲನೆ ನೀಡಲಾಯಿತು. ಈ ಬಾರಿ ಮೊದಲ ಬಾರಿಗೆ ಗಜರಾಜ ಪ್ರಶಾಂತ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು, ದಸರಾ ಸಂಭ್ರಮಕ್ಕೆ ವಿಶೇಷ ಮೆರುಗು ನೀಡಿತು.

ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾದ ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ದಿವ್ಯದರ್ಶನ ಪಡೆದ ಅಪಾರ ಸಂಖ್ಯೆಯ ಭಕ್ತರು. ಅಂಬಾರಿ ಹೊತ್ತ ಪ್ರಶಾಂತ ಆನೆಯ ರಾಜಗಾಂಭೀರ್ಯದ ನಡಿಗೆ ಹಾಗೂ ಚಾಮುಂಡೇಶ್ವರಿಯ ದರ್ಶನ ಭಕ್ತರಲ್ಲಿ ಭಕ್ತಿಭಾವ ಮತ್ತು ಸಂಭ್ರಮವನ್ನು ಇಮ್ಮಡಿಗೊಳಿಸಿತು.

ಭಕ್ತಿ, ಸಂಸ್ಕೃತಿ, ಪರಂಪರೆ ಹಾಗೂ ವೈಭವಗಳ ಸಂಗಮವಾಗಿ ಕಂಗೊಳಿಸಿದ ಜಂಬೂಸವಾರಿ, ಮೈಸೂರು ದಸರಾದ ಐತಿಹಾಸಿಕ ಪರಂಪರೆಯನ್ನು ಮತ್ತೊಮ್ಮೆ ಜಗತ್ತಿಗೆ ಪರಿಚಯಿಸಿತು. ನಾಡಿನ ಜನತೆಗೆ ತಾಯಿ ಚಾಮುಂಡೇಶ್ವರಿಯ ದಿವ್ಯದರ್ಶನದೊಂದಿಗೆ ವಿಜಯದಶಮಿಯ ಸಂಭ್ರಮ ಮನೆಮಾಡಿತು.

Leave a Reply

Your email address will not be published. Required fields are marked *

error: Content is protected !!