ರಾಜ್ಯದಲ್ಲಿ ಮಳೆ ಅಬ್ಬರದ ಮುನ್ಸೂಚನೆ: ಮುಂದಿನ 4–5 ದಿನ ಭಾರೀ ವರ್ಷಧಾರೆ, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ವಾಯುಭಾರ ಕುಸಿತದಿಂದ ಹವಾಮಾನದಲ್ಲಿ ಬದಲಾವಣೆ ಉಂಟಾಗಿದ್ದು, ದೇಶದ ಹಲವು ಮಹಾನಗರಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಇದರ ಪರಿಣಾಮ ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಗ್ರಾಮಾಂತರದಲ್ಲೂ ಮಳೆ ಸಾಧ್ಯತೆ

ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಮೀನುಗಾರರಿಗೆ ಎಚ್ಚರಿಕೆ

ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಸಮುದ್ರದ ಪರಿಸ್ಥಿತಿ ಪ್ರತಿಕೂಲವಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಕರಾವಳಿಯ ಕೆಲವು ಜಿಲ್ಲೆಗಳಲ್ಲಿಯೂ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Leave a Reply

Your email address will not be published. Required fields are marked *

error: Content is protected !!