ಹೊಸಹಳ್ಳಿ ಸಮೀಪ ಕರಡಿ ಪ್ರತ್ಯಕ್ಷ: ಉಜ್ಜಿನಿಯಲ್ಲಿ ಚಿರತೆಗಳ ಬೆನ್ನಲ್ಲೇ ಕರಡಿ ಪ್ರತ್ಯಕ್ಷ

ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಸಮೀಪ ಇಂದು ಮಧ್ಯಾಹ್ನ ಕರಡಿಯೊಂದು ಕಾಣಿಸಿಕೊಂಡಿದ್ದು, ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಚಿರತೆ ಕಂಡು ಭಯಭೀತರಾದ ಘಟನೆ ನಡೆದಿದೆ.

ವಿದ್ಯಾರ್ಥಿಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಕರಡಿ ಕಾಣಿಸಿಕೊಂಡಿದೆ. ಇದರಿಂದ ವಿದ್ಯಾರ್ಥಿಗಳು ಆತಂಕಗೊಂಡಿದ್ದು, ಸುತ್ತಮುತ್ತಲಿನ ಗ್ರಾಮಸ್ಥರಲ್ಲಿಯೂ ಕಾಡುಪ್ರಾಣಿಗಳ ಸಂಚಾರದ ಬಗ್ಗೆ ಭಯ ಮೂಡಿದೆ.

ತಾಲೂಕಿನ ಉಜ್ಜಿನಿ ಗ್ರಾಮದಲ್ಲಿ ನಿನ್ನೆ ರಾತ್ರಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದವು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಇಂದು ಸ್ಥಳದಲ್ಲಿ ಚಿರತೆಗಳನ್ನು ಸೆರೆಹಿಡಿಯಲು ಬೋನು ಇರಿಸಿದ್ದಾರೆ.

ಇದರ ಬೆನ್ನಲ್ಲೇ ಇಂದು ಕೊಟ್ಟಿಗೆಮಾಚೇನಹಳ್ಳಿ ಸಮೀಪವೂ ಚಿರತೆ ಕಾಣಿಸಿಕೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಾಲೂಕಿನ ವಿವಿಧೆಡೆ ಕರಡಿ ಮತ್ತು ಚಿರತೆಗಳ ಪ್ರತ್ಯಕ್ಷತೆಯಿಂದ ಗ್ರಾಮಸ್ಥರು ಹಾಗೂ ರೈತರು ಆತಂಕಕ್ಕೊಳಗಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಮತ್ತು ಕಾಡುಪ್ರಾಣಿಗಳ ಚಲನವಲನದ ಮೇಲೆ ನಿಗಾ ವಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!