
ದೊಡ್ಡಬಳ್ಳಾಪುರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ದೇವರಿಗೆ ವಿಶೇಷ ಅಲಂಕಾರ ನೆರವೇರಿಸುವುದರ ಜೊತೆಗೆ ದೇವಾಲಯದ ರಾಜಗೋಪುರಕ್ಕೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಬಣ್ಣಬಣ್ಣದ ದೀಪಗಳಿಂದ ಕಂಗೊಳಿಸಿದ ದೇವಾಲಯದ ಸೊಬಗು ಭಕ್ತಾದಿಗಳ ಕಣ್ಮನ ಸೆಳೆಯಿತು.