ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಕನ್ನಡ ನಾಡು, ನುಡಿ, ಸಂಸ್ಕೃತಿಯ ಮಹತ್ವ ಸಾರುವ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಸಂಭ್ರಮಕ್ಕೆ ಮೆರುಗು ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ವೆಂಕಟೇಶ್ ರೆಡ್ಡಿ ಅವರು, ಕನ್ನಡ ಭಾಷೆ ನಮ್ಮ ನಾಡಿನ ಅಸ್ಮಿತೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ವಿದ್ಯಾರ್ಥಿಗಳು ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವುದರ ಜೊತೆಗೆ ನಿತ್ಯ ಜೀವನದಲ್ಲಿಯೂ ಕನ್ನಡವನ್ನು ಹೆಚ್ಚು ಬಳಸಬೇಕು. ಕನ್ನಡ ನಾಡಿನ ಇತಿಹಾಸ, ಪರಂಪರೆ ಹಾಗೂ ಮಹನೀಯರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯವಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!