ಯುವ ಕರ್ನಾಟಕ ವೇದಿಕೆ ದೊಡ್ಡಬಳ್ಳಾಪುರ ತಾಲೂಕು ಘಟಕದ ಪದಾಧಿಕಾರಿಗಳ ನೇಮಕ

 

ದೊಡ್ಡಬಳ್ಳಾಪುರ: ಯುವ ಕರ್ನಾಟಕ ವೇದಿಕೆಯ ದೊಡ್ಡಬಳ್ಳಾಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಘಟಕದ ಗೌರವ ಅಧ್ಯಕ್ಷರಾಗಿ ಕೊತ್ತೂರಪ್ಪ, ಅಧ್ಯಕ್ಷರಾಗಿ ಟಿ.ಸಿ. ತಮ್ಮೇಗೌಡ, ಉಪಾಧ್ಯಕ್ಷ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಸೋಮಶೇಖರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀನಾಥ್ ಎಂ., ಕಾರ್ಯದರ್ಶಿಯಾಗಿ ನಾಗೇಂದ್ರ, ಖಜಾಂಜಿಯಾಗಿ ಮಹೇಶ್ ಪಿ.ಬಿ. ಅವರನ್ನು ನೇಮಕ ಮಾಡಲಾಗಿದೆ.

 

ಅದೇ ರೀತಿ ಕಾರ್ಯಾಧ್ಯಕ್ಷರಾಗಿ ರಂಜಿತ್ ಹಾಗೂ ಮುಖ್ಯ ಸಂಚಾಲಕರಾಗಿ ರಾಮಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

ನೂತನ ಪದಾಧಿಕಾರಿಗಳು ಸಂಘಟನೆಯನ್ನು ಬಲಪಡಿಸುವುದರೊಂದಿಗೆ ಯುವಕರನ್ನು ಒಗ್ಗೂಡಿಸಿ, ಸಮಾಜಮುಖಿ ಹಾಗೂ ಜನಪರ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!