
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದ ಹುಂಡಿ ಬಳಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನದ ಮೇಲೆ ಆಹಾರ ಇಲಾಖೆ ಹಾಗೂ ತೆರಕಣಾಂಬಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.
ಕಾರ್ಯಾಚರಣೆಯಲ್ಲಿ ಸಾಗಾಟಕ್ಕೆ ಬಳಸಿದ್ದ ಮಹೀಂದ್ರಾ ಮ್ಯಾಕ್ಸಿಮೊ ಗೂಡ್ಸ್ ವಾಹನ ಸಹಿತ 1,000 ಕೆ.ಜಿ. ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಆರೋಪದ ಮೇಲೆ ಸಿಕಂದರ್ ಅಹಮದ್ ಎಂಬಾತನನ್ನು ಬಂಧಿಸಲಾಗಿದೆ.