
2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ನಡೆಯಲಿರುವ ಜವಾಹರ್ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆ (JNVST-2027) ಯು ನವೆಂಬರ್ 28, 2026 ರಂದು ನಡೆಯಲಿದ್ದು, ಪರೀಕ್ಷೆಯ ಪ್ರವೇಶ ಪತ್ರಗಳನ್ನು ಬಿಡುಗಡೆ ಮಾಡಲಾಗಿದೆ.
ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಅಧಿಕೃತ ವೆಬ್ಸೈಟ್ https://cbseitms.rcil.gov.in/nvs/AdminCard/Admit2027Card ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಜೊತೆಗೆ ಅಭ್ಯರ್ಥಿಗಳು ತಮ್ಮ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ. (BEO) ಕಚೇರಿಗಳಿಂದಲೂ ಪ್ರವೇಶ ಪತ್ರದ ಪ್ರತಿಯನ್ನು ಪಡೆಯಬಹುದಾಗಿದೆ. ಪ್ರವೇಶ ಪತ್ರದಲ್ಲಿ ಯಾವುದೇ ಲೋಪದೋಷಗಳಿದ್ದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿಯಲ್ಲಿರುವ ಪ್ರಧಾನಮಂತ್ರಿ ಶ್ರೀ (PM SHRI) ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.