ಮರಕ್ಕೆ ಡಿಕ್ಕಿ ಹೊಡೆದ ಕಾರು: ಭೀಕರ ಕಾರು ಅಪಘಾತಕ್ಕೆ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ದುರ್ಮರಣ: ನಾಲ್ವರಿಗೆ ಗಂಭೀರ ಗಾಯ

ನೆಲಮಂಗಲ: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.

ತುಮಕೂರಿನ ಜಾನವಿ (19) ಹಾಗೂ ವೈಷ್ಣವಿ (19) ಮೃತಪಟ್ಟ ವಿದ್ಯಾರ್ಥಿನಿಯರು. ಇವರು ಸಪ್ತಗಿರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ವಿದ್ಯಾರ್ಥಿಗಳು ಕುಣಿಗಲ್ ತಾಲೂಕಿನ ಹುತ್ರಿದುರ್ಗಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಾರಿನಲ್ಲಿದ್ದ ಗಗನ್, ಜಸ್ವಂತ್, ಹರ್ಷಿಣಿ.ಎಸ್ ಹಾಗೂ ಹರ್ಷಿಣಿ.ಜಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.

ಮೃತ ವಿದ್ಯಾರ್ಥಿನಿಯರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!