ಇಂದು 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ವಿಶ್ವ ಯೋಗ ದಿನಾಚರಣಾ ಟ್ರಸ್ಟ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಹಾಗೂ ಯೋಗ ಕೇಂದ್ರಗಳ ಸಹಯೋಗದಲ್ಲಿ ನಗರದ KMH ಕನ್ವೆನ್ಷನ್ ಹಾಲ್ ನಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಧೀರಜ್ ಮುನಿರಾಜ್.
ಯೋಗಾಸನದಲ್ಲಿ ಮಹಿಳೆಯರು, ವೃದ್ಧರು, ಯುವಕ-ಯುವತಿಯರು, ಮಕ್ಕಳು ಸೇರಿದಂತೆ ಇತರರು ಭಾಗಿಯಾಗಿದ್ದರು.
ಈ ವೇಳೆ ಪುಷ್ಪಾಂಡಜ ಮಹರ್ಷಿ ಆಶ್ರಮದ ದಿವ್ಯ ಜ್ಞಾನಾನಂದಗಿರಿ ಸ್ವಾಮೀಜಿ, ಕೆ.ಎಂ.ಹನುಮಂತರಾಯಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.