ಜೆಸಿಬಿ- ಬೈಕ್ ನಡುವೆ ಅಪಘಾತ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ಜೆಸಿಬಿ ವಾಹನ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾರಸಿಂಹನಹಳ್ಳಿ ಗ್ರಾಮದ ಬಳಿ ನಡೆದಿದೆ.

ತಾಲೂಕಿನ ಬಾಲೇನಹಳ್ಳಿ ಗ್ರಾಮದ ಸುರೇಶ್ (36) ಮೃತ ದುರ್ದೈವಿ.

ಸುರೇಶ್ ಅವರು ಬಾಲೇನಹಳ್ಳಿ ಗ್ರಾಮದಿಂದ ದೊಡ್ಡಬಳ್ಳಾಪುರದ ಹೂವಿನ ಮಾರುಕಟ್ಟೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಜೆಸಿಬಿ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸುರೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನೆ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!