
ನವೆಂಬರ್ 30 ರೊಳಗೆ ಪಡಿತರ ಚೀಟಿದಾರರು ತಮ್ಮ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿ ಅಥವಾ “ಅನ್ನ ಸೇವೆ” ಮೊಬೈಲ್ ಅಪ್ಲಿಕೇಶನ್ ಮೂಲಕ ಇ-ಕೆವೈಸಿ ಮಾಡಿಸಿಕೊಳ್ಳಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.
ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ಫಲಾನುಭವಿಗಳ ಮಾಹಿತಿಯನ್ನು ನವೀಕರಿಸುವ ಉದ್ದೇಶದಿಂದ, ಇ-ಕೆವೈಸಿ ಪೂರ್ಣಗೊಳಿಸಿ ಐದು ವರ್ಷ ಮತ್ತು ಒಂದು ವರ್ಷ ಪೂರೈಸಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಮರು ಇ-ಕೆವೈಸಿ ಮಾಡಿಸಿಕೊಳ್ಳಬೇಕು.
ಜಿಲ್ಲೆಯಲ್ಲಿ ಐದು ವರ್ಷ ಪೂರೈಸಿರುವ ಒಟ್ಟು 444037 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದು, ಇನ್ನೂ 68059 ಫಲಾನುಭವಿಗಳು ಇ-ಕೆವೈಸಿ ಬಾಕಿ ಇದೆ. ಒಂದು ವರ್ಷ ಪೂರೈಸಿರುವ 11789 ಫಲಾನುಭವಿಗಳು ಇ-ಕೆವೈಸಿ ಪೂರ್ಣಗೊಳಿಸಿದ್ದು, 130227 ಫಲಾನುಭವಿಗಳ ಇ-ಕೆವೈಸಿ ಬಾಕಿ ಉಳಿದಿದೆ. ಬಾಕಿ ಉಳಿದಿರುವ ಎಲ್ಲಾ ಫಲಾನುಭವಿಗಳು ನ. 30 ರೊಳಗೆ ಇ-ಕೆವೈಸಿ ಮಾಡಿಸಿಕೊಳ್ಳ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ಧಾರೆ.