ಹಿಂಬದಿಯಿಂದ ಬೈಕ್ ಡಿಕ್ಕಿ: ಪಾದಚಾರಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಕಾಡನೂರು ಕೈಮರ ಸಮೀಪದ ಆಂಜನಮೂರ್ತಿ ನಗರ ಬಳಿ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನಡೆದಿದೆ.

ಮೃತರನ್ನು ಮಂಜುನಾಥ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಅವರಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!