ಒಬ್ಬರ ರಕ್ತದಾನದಿಂದ ನಾಲ್ವರಿಗೆ ಜೀವದಾನ- ಡಾ. ಮುರಳಿಮೋಹನ್

ದೊಡ್ಡಬಳ್ಳಾಪುರ: ರಕ್ತದಾನವು ಮಹಾದಾನವಾಗಿದ್ದು, ಒಬ್ಬ ವ್ಯಕ್ತಿ ಒಂದು ಬಾರಿ ರಕ್ತದಾನ ಮಾಡುವುದರಿಂದ ನಾಲ್ವರು ರೋಗಿಗಳಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ. ಮುರಳಿಮೋಹನ್ ತಿಳಿಸಿದರು.

ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ (ನ.25) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ವೇಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಒಬ್ಬ ದಾನಿ ನೀಡುವ ರಕ್ತದಿಂದ ನಾಲ್ವರಿಗೆ ಪ್ರಯೋಜನವಾಗುತ್ತದೆ. ರಕ್ತದಾನದ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಂಡು ಸ್ವಯಂಪ್ರೇರಿತವಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ವಿಜಯ್ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಅವಶ್ಯಕತೆ ಇರುವ ರೋಗಿಗಳಿಗೆ ನೆರವಾಗಬೇಕು. ಇದರಿಂದ ತುರ್ತು ಸಂದರ್ಭಗಳಲ್ಲಿ ರೋಗಿಗಳಿಗೆ ಸಕಾಲದಲ್ಲಿ ರಕ್ತ ದೊರೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಆಕಾಶ್ ಮೆಡಿಕಲ್ ಕಾಲೇಜಿನ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗಳು ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಕ್ತದಾನದ ಕುರಿತು ಜಾಗೃತಿ ಮತ್ತು ಪ್ರೇರಣೆ ಮೂಡಿಸುವ ಅಗತ್ಯವಿದೆ. ರಕ್ತದಾನದಿಂದ ಆಗುವ ಪ್ರಯೋಜನಗಳ ಕುರಿತು ವಿವರಿಸಿದರು.

ಲಯನ್ಸ್ ಕ್ಲಬ್ ಅಧ್ಯಕ್ಷೆ ವಸುಂಧರಾ ದೇವಿ ಮಾತನಾಡಿ, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಕೀಲು ಮತ್ತು ಮೂಳೆ ತಜ್ಞ ಡಾ. ಮಂಜುನಾಥ್ ಅವರ ನೇತೃತ್ವದಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ರಮೇಶ್, ಜಯಪ್ರಕಾಶ್, ನಾರಾಯಣಪ್ಪ, ಆಸ್ಪತ್ರೆಯ ಸಿಬ್ಬಂದಿಗಳಾದ ಬಿಂದು, ರಾಜೇಂದ್ರ ಕೆ.ಎಚ್., ಅರುಣ್, ನಿಶಾ, ಚಿತ್ರಾ, ರುಕ್ಮಿಣಿ, ಮಂಜುನಾಥ್, ನಾಗರಾಜ್, ಮಧು, ರೂಪ, ಯುವರಾಜ್ ಸೇರಿದಂತೆ ಆಸ್ಪತ್ರೆಯ ಎಲ್ಲಾ ಪ್ರಯೋಗಾಲಯ ತಂತ್ರಜ್ಞರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!