ರಾಜ್ಯದಲ್ಲಿ ಬರ, ಪ್ರವಾಹ ಮತ್ತು ಇತರ ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಪರಿಸ್ಥಿತಿಯನ್ನು ಪರಿಶೀಲಿಸಲು ಮತ್ತು ಅದನ್ನು ಪರಿಣಾಮಕಾರಿಯಾಗಿ ಎದುರಿಸಲು ಅಗತ್ಯ ನಿರ್ದೇಶನಗಳನ್ನು ನೀಡಲು, ನೀತಿಯನ್ನು ರೂಪಿಸಲು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಿರ್ಧರಿಸಲು ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.
ಒಬ್ಬ ಅಧ್ಯಕ್ಷ ಹಾಗೂ 5 ಮಂದಿ ಸದಸ್ಯರಿರುವ ಉಪಸಮಿತಿಯನ್ನು ಸರ್ಕಾರ ರಚನೆ ಮಾಡಿದೆ.
1 ಕಂದಾಯ ಸಚಿವ ಕೃಷ್ಣ ಭೈರೇಗೌಡರನ್ನು ಉಪಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸದಸ್ಯರ ಪಟ್ಟಿ
1.ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ
2.ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ
3.ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ
4.ಗಣಿ ಮತ್ತು ಭೂ ವಿಜ್ಞಾನ ಮತ್ತು ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ
5.ಸಹಕಾರ ಸಚಿವ ಕೆ.ಎನ್. ರಾಜಣ್ಣ