ಗೃಹ ಜ್ಯೋತಿ ನೋಂದಣಿಗೆ ಸಾರ್ವಜನಿಕರಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.
ಗೃಹ ಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುವ ಆರೋಪ ಕೇಳಿಬಂದಿರುವ ಹಿನ್ನೆಲೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಸರ್ಕಾರಸ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ನೋಂದಣಿ ಸಂಪೂರ್ಣ ಉಚಿತ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
ಗ್ರಾಮ ಒನ್, ಕರ್ನಾಟಕ ಒನ್ ಹಾಗು ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ. ಅದು ಬಿಟ್ಟು ಹೆಚ್ಚುವರಿಯಾಗಿ ಹಣ ಪೀಕಿದರೆ ಕಾನೂನು ಕ್ರಮ ಜರುಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣ ಕೇಳಿದರೆ ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದರೆ ಆಗ ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ.