ತಾಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರು: ಸಿಂಥೆಟಿಕ್ ಟ್ರ್ಯಾಕ್ ಸಿದ್ಧತೆಗೆ ಒತ್ತು: ಶಾಸಕ ಧೀರಜ್ ಮುನಿರಾಜ್

ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಬೇಕು. ಅಂತಹ ಕ್ರೀಡಾಪಟುಗಳಿಗೆ ಸದಾ ಬೆನ್ನೆಲುಬಾಗಿ ನಿಲ್ಲಲಾಗುವುದು ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.

ನಗರದ ಭಗತ್ ಸಿಂಗ್ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಗರ ಮತ್ತು ಕಸಬಾ ಹೋಬಳಿಯ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಕ್ಕಳಲ್ಲಿನ ಪ್ರತಿಭೆ ಹೊರಬರಲು ಕ್ರೀಡೆ ಸಹಕಾರಿಯಾಗಿರುತ್ತದೆ. ಶೈಕ್ಷಣಿಕ ಬೆಳವಣಿಗೆಗೆ ಕ್ರೀಡೆ ಪ್ರಮುಖ ಪಾತ್ರ ವಹಿಸುತ್ತದೆ. ಓದುವಂತ ಸಮಯದಲ್ಲಿ ಕೇವಲ ವಿದ್ಯೆ ಮೇಲೆ ಗಮನವಿರಲಿ. ಹೆಚ್ಚಿನ ಅಭ್ಯಾಸ ಮಾಡುವ ಮೂಲಕ ಪ್ರತಿಫಲ ಇದ್ದೆ ಇರುತ್ತದೆ ಎಂದರು.

ನಂತರ ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ ಮಾತನಾಡಿ, ಶಿಕ್ಷಣ ಇಲಾಖೆಯಿಂದ ನಡೆಸುವಂತ ಕ್ರೀಡಾಕೂಟಗಳಲ್ಲಿ ತೀರ್ಪುಗಾರರಾಗಿ ಕರ್ತವ್ಯ ನಿರ್ಹಹಿಸುವ ದೈಹಿಕ ಶಿಕ್ಷಕರ ಅಂತಿಮ ತೀರ್ಮಾನವಾಗಿರುತ್ತದೆ. ಹೊರಗಿನ ಅಥವಾ ಯಾರೇ ಸಾರ್ವಜನಿಕರು ಮಧ್ಯೆ ಪ್ರವೇಶಿಸಿ ಕ್ರೀಡಾಕೂಟಕ್ಕೆ ಅಡ್ಡಿಪಡಿಸಿದರೆ ಅಂತಹ ಶಾಲೆಯನ್ನು ಕ್ರೀಡಾಕೂಟದಿಂದ ಮೂರು ವರ್ಷಗಳ ನಿಷೇಧ ಹೇರಲಾಗುವುದು ಎಂದು ತಿಳಿಸಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ ಆದರೆ ಕ್ರೀಡಾಮನೋಬಾವದಿಂದ ಪಾಲ್ಗೊಂಡು ಕ್ರೀಡಾ ಸ್ಫೂರ್ತಿ ಮೇರೆಯುವುದು ವಿದ್ಯಾರ್ಥಿಗಳು ಅರಿತುಕೊಂಡು ಅಳವಡಿಸಿಕೊಳ್ಳಬೇಕು. ಇದು ಶೈಕ್ಷಣಿಕ ಮತ್ತು ಉತ್ತಮ ಜೀವನಕ್ಕೆ ನಾಂದಿಯಾಗುತ್ತದೆ ಕಿವಿಮಾತು ಹೇಳಿದರು.

ಈ ವೇಳೆ ಟಿಎಪಿಎಂಸಿಎಸ್ ಅಧ್ಯಕ್ಷ
ಆಂಜನಗೌಡ, ನಗರಸಭೆ ಅಧ್ಯಕ್ಷೆ ಸುಧಾರಣಿ ಲಕ್ಷ್ಮೀನಾರಾಯಣ, ಉಪಾಧ್ಯಕ್ಷೆ ಫರ್ಹಾನ ತಾಜ್, ಬಿಇಓ ರಂಗಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೈಕುಮಾರ್, ದೈಹಿಕ ಶಿಕ್ಷಕರ ಸಂಘದ ಬರಗೂರು ನರಸಿಂಹಮೂರ್ತಿ, ದೈಹಿಕ ಶಿಕ್ಷಕರು, ನಗರಸಭಾ ಸದಸ್ಯರು ಇದ್ದರು.

Leave a Reply

Your email address will not be published. Required fields are marked *