ಆಕಸ್ಮಿಕವಾಗಿ ಬೆಂಕಿ ಬಿದ್ದು ಹೊತ್ತಿ ಉರಿದ ಕಾಟನ್ ಬಾಕ್ಸ್ ಗೊಡೌನ್. ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರೋ ಘಟನೆ ತಾಲ್ಲೂಕಿನ ಆಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ ಎಂಬುವವರಿಗೆ ಸೇರಿದ ಗೊಡೌನ್ ಇದಾಗಿದ್ದು, ಕಳೆದ ರಾತ್ರಿ 11 .30 ರ ಸುಮಾರಿಗೆ ಬೆಂಕಿ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗೋಡೌನ್ ನಲ್ಲಿಟ್ಟಿದ್ದ ಕಾಟನ್ ಬಾಕ್ಸ್ ನ ಕಚ್ಚಾ ವಸ್ತುಗಳು ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಗುತಿಯಾಗಿದೆ.
ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.