ಗ್ಯಾರಂಟಿ ಯೋಜನೆ ಜಾರಿಗೆ ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನ ಬಳಸಿ ದಲಿತ ಸಮುದಾಯಕ್ಕೆ ಅನ್ಯಾಯ- ರಾಜ್ಯ ಗೆದ್ದ ಕಾಂಗ್ರೆಸ್ ಗೆ ದೇಶ ಗೆದ್ದ ಭ್ರಮೆಯಲ್ಲಿದೆ – ಬಿವೈವಿ

ಕಾಂಗ್ರೆಸ್ ಯೋಜನೆಗಳಿಗೆ ಚಾಲನೆ ನೀಡುವ ಮುನ್ನಾ ಯೋಚನೆ ಮಾಡಬೇಕು. ಗ್ಯಾರಂಟಿ ಯೋಜನೆ ಜಾರಿ ಮಾಡಲು ಎಸ್​ಸಿಎಸ್​ಪಿ ಟಿಎಸ್​ಪಿ ಅನುದಾನವನ್ನು ಬಳಸಿ ದಲಿತ ಸಮುದಾಯಗಳಿಗೆ ಅಲ್ಲದೆ ಬೇರೆ ಸಮುದಾಯಗಳಿಗೂ ಕೂಡ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಿದೆ. ಒಂದು ಕೈಯಿಂದ ಕೊಟ್ಟು ಇನ್ನೊಂದು ಕೈಯಿಂದ ಕಿತ್ತು ಕೊಳ್ಳುತ್ತಿದ್ದಾರೆ ಇದು ಸರ್ಕಾರಕ್ಕೆ ಶೋಭೆ ತರುವುದಿಲ್ಲ ಎಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಿದ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು.

ನಗರದ ಬಸವ ಭವನದಲ್ಲಿ ನಡೆದ ಗುರುವಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದರು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬೂದಿಯಾಗುತ್ತೆ ಎಂದು ವೀರಪ್ಪ ಮೊಯ್ಲಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದರು.. ಈ ವಿಚಾರ ಕುರಿತು ಬಿ.ವೈ ವಿಜಯೇಂದ್ರ ಮಾತನಾಡಿ, ಕಾಂಗ್ರೆಸ್ ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಇಡಿ ದೇಶವನ್ನೇ ಗೆದ್ದಿದ್ದೆವೆ ಎಂಬ ಭ್ರಮೆಯಲ್ಲಿದ್ದಾರೆ..ರಾಜ್ಯದಲ್ಲಿ 25 ಸ್ಥಾನ ಗೆದ್ದು ದೇಶದಲ್ಲಿ ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ದಿನದಿಂದ ದಿನಕ್ಕೆ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ. ಸಮಾಜಘಾತುಕ ಕೃತ್ಯ, ಸಮಾಜ, ದೇಶ ವಿರೋಧಿ ಚಟುವಟಿಕೆಗಳು ಜಾಸ್ತಿಯಾಗುತ್ತಿರುವುದು ಖಂಡನೀಯ. ಸಿದ್ದರಾಮಯ್ಯರ ಹಿಂದಿನ ಸರ್ಕಾರದಲ್ಲೂ ಇಂತಹದೇ ಪ್ರಕರಣಗಳು ನಡೆದಿದ್ದವು ಎಂದರು.

Leave a Reply

Your email address will not be published. Required fields are marked *