ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವೀಡಿಯೋ ಚಿತ್ರೀಕರಣ ನಡೆಸಲಾಗಿದೆ ಎಂಬ ಆರೋಪವಿದ್ದು, ಇದು ಸೂಕ್ಷ್ಮ ಪ್ರಕರಣವಾಗಿರುವುದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ಜುಲೈ 18 ರಂದು ರಹಸ್ಯ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಜುಲೈ 26 ರಂದು ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೋಟೋ ಕೇಸ್ ದಾಖಲಿಸಿದ್ದರು.
ಈ ಪ್ರಕರಣ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿತ್ತು. ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿತ್ತು. ಸದ್ಯ ರಾಜ್ಯ ಸರ್ಕಾರವು ಪ್ರಕರಣದ ತನಿಖೆಯನ್ನು ನಡೆಸಲು ಸಿಐಡಿಗೆ ಒಪ್ಪಿಸಿ ಆದೇಶಿಸಿದೆ.