ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಇಂದು ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ನೂತನ ಡಿವೈಎಸ್ಪಿ ಪಿ.ರವಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದ ತಾಲೂಕಿನ ವಿವಿಧ ಠಾಣಾ ಇನ್ಸ್ ಪೆಕ್ಟರ್ ಹಾಗೂ ಸಬ್ ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿ.
ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿತ್ತು. ತೆರವಾದ ಸ್ಥಾನಕ್ಕೆ ಪಿ.ರವಿ ಅವರನ್ನು ನೇಮಕ ಮಾಡಲಾಗಿತ್ತು. ಈ ಹಿನ್ನೆಲೆ ಇಂದು ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಕರ್ತವ್ಯಕ್ಕೆ ವರದಿ ಮಾಡಿಕೊಂಡರು