ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯ ಆವರಣದಲ್ಲಿಂದು “77ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದ ಅಂಗವಾಗಿ ಯೋಗ ಶಿಕ್ಷಕರಾದ ಮೋಹನ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆಯನ್ನು ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಅತಿಥಿ ಉಪನ್ಯಾಸಕಿ ವಿಜಯಲಕ್ಷ್ಮೀ, ಹಿರಿಯ ಕಚೇರಿ ಸಹಾಯಕ ಅರುಣ್ಕುಮಾರ್, ಕಚೇರಿ ಸಿಬ್ಬಂದಿಗಳು ಸೇರಿದಂತೆ ಅಣಬೆ ಬೇಸಾಯ ತರಬೇತಿಯ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.