ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಆ.31ಕ್ಕೆ ಕೊನೆ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ  ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್.ಡಬ್ಲ್ಯೂ, ಬಿ.ಲಿಬ್.ಐ.ಎಸ್ಸಿ, ಎಂ.ಎ, ಎಂ.ಎಸ್ಸಿ, ಎಂ.ಬಿ.ಎ, ಎಂ.ಲಿಬ್.ಐ.ಎಸ್ಸಿ, ಎಂ.ಸಿ.ಎ, ಎಂ.ಎಸ್.ಡಬ್ಲ್ಯೂ, ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ ಮತ್ತು ಯುಜಿ ಶಿಕ್ಷಣ ಕ್ರಮಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು 2023 ರ ಜೂನ್ 28 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ ಬಾಪೂಜಿನಗರ-01 ಆನ್‌ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‌ಸೈಟ್ www.ksoumysuru.ac.in ನಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ವಿವರಣಾ ಪುಸ್ತಕ ಅನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ ವೆಬ್ ಸೈಟ್ ನಲ್ಲಿ ಲಭ್ಯವಿರುವ ಆನ್ ಲೈನ್ ಅಡ್ಮಿಶನ್ ಪೋರ್ಟಲ್ ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಬಾಪೂಜಿನಗರ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ.

ಕೋರ್ಸ್ ಗಳ ಪ್ರವೇಶಾತಿ ಗಾಗಿ 2023ರ ಆಗಸ್ಟ್ 31 ಕೊನೆ ದಿನವಾಗಿದೆ.

ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಗಸ್ಟ್ 31ರ ಒಳಗೆ ಪ್ರಾದೇಶಿಕ ಕೇಂದ್ರಕ್ಕೆ ದಾಖಲಾತಿಗಳೊಂದಿಗೆ ಭೇಟಿ ನೀಡಿ ಹಾಗೂ ಇನ್ನು ಅರ್ಜಿ ಹಾಕಿಲ್ಲದೆ ಇರುವಂತಹ ಆಸಕ್ತ ವಿದ್ಯಾರ್ಥಿಗಳು ಕಡೆ ದಿನಾಂಕ ದೊಳಗೆ ಅರ್ಜಿ ಸಲ್ಲಿಸಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್ www.ksoumysuru.ac.in ಮತ್ತು ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ 01, ಮೊದಲನೇ ಮಹಡಿ, ಸ್ಯಾಟ್ ಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-28, ಕಚೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98449-65515 ಅನ್ನು ಸಂಪರ್ಕಿಸಬಹುದಾಆಹ್ವಾನ

Leave a Reply

Your email address will not be published. Required fields are marked *