ಬಿ‌.ಎಡ್, ಡಿ.ಎಡ್‌ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಬಿ.ಎಡ್ & ಡಿ.ಎಡ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನ ನೀಡಲು ಸೇವಾಸಿಂಧು (https://sevasindhu.karnataka.gov.in) ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖಾಂತರ ದಿನಾಂಕ 2023 ರ ಆಗಸ್ಟ್ 21 ರಿಂದ ಅರ್ಜಿ ಆಹ್ವಾನಿಸಲಾಗಿದ್ದು. ಅರ್ಜಿ ಸಲ್ಲಿಸಲು 2023 ರ ಸೆಪ್ಟೆಂಬರ್ 21 ಕೊನೆಯ ದಿನವಾಗಿದೆ.

ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರಿಂದ ಧೃಡೀಕರಿಸಿ, ಹಾರ್ಡ್ ಪ್ರತಿಯನ್ನು ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ:216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಇಲ್ಲಿಗೆ ಸಲ್ಲಿಸತಕ್ಕದ್ದು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnatak.gov.in ಜಿಲ್ಲಾ ಕಛೇರಿ, ಜಿಲ್ಲಾ ಮಾಹಿತಿ/ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವುದು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990,
ಬೆಂಗಳೂರು ಗ್ರಾಮಾಂತರ ಜಿಲ್ಲಾ ದೂರವಾಣಿ ಸಂಖ್ಯೆ:080-22866966,
ದೊಡ್ಡಬಳ್ಳಾಪುರ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27627444,
ನೆಲಮಂಗಲ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27725445,
ದೇವನಹಳ್ಳಿ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27682882,
ಹೊಸಕೋಟೆ ತಾಲ್ಲೂಕು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ:080-27931899 ಯನ್ನು ಸಂಪರ್ಕಿಸಬಹುದು.

ಬಿ.ಎಡ್ & ಡಿ.ಎಡ್ ನಲ್ಲಿ ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಗ್ರಾಮೀಣ ಮತ್ತು ನಗರ ವಿಭಾಗದಲ್ಲಿ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸವನ್ನು ಪ್ರೋತ್ಸಾಹಿಸಿ ಕಲಿಕಾ ಮತ್ತು ಬೋಧನಾ ಸಾಮಾಗ್ರಿಗಳನ್ನು ಖರೀದಿಸಲು ಆರ್ಥಿಕ ಸಹಾಯ ಮಾಡುವ ಹಿತ ದೃಷ್ಟಿಯಿಂದ National council for teacher education ನಿಂದ ಮಾನ್ಯತೆ ಪಡೆದಿರುವ ಬಿ.ಎಡ್ ಹಾಗೂ Department of state education research and training ನಿಂದ ಮಾನ್ಯತೆ ಪಡೆದಿರುವ ಡಿ.ಎಡ್ ಕೋರ್ಸುಗಳ ಸರ್ಕಾರಿ/ಅರೆ ಸರ್ಕಾರಿ/ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ಬಿ.ಎಡ್ & ಡಿ.ಎಡ್ ಕೋರ್ಸುಗಳಲ್ಲಿ ದಾಖಲಾತಿ ಹೊಂದಿ ವ್ಯಾಸಂಗ ಮಾಡುತ್ತಿರಬೇಕು. ಅಭ್ಯರ್ಥಿ ಗಳು ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು.

ವಿದ್ಯಾರ್ಥಿಯು ಅಲ್ಪಸಂಖ್ಯಾತರ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಸಿಖ್,ಬೌದ್ಧ ಮತ್ತು ಪಾರ್ಸಿ) ಸಮುದಾಯಕ್ಕೆ ಸೇರಿದವರಾಗಿರಬೇಕು. ಕೋರ್ಸುಗಳ ಅವಧಿಗೆ ತಕ್ಕಂತೆ ಪ್ರತಿ ವರ್ಷ ರೂ.25,000/- ಸಾವಿರದಂತೆ (ಗರಿಷ್ಠ 02 ವರ್ಷ) ಅನುದಾನವನ್ನು ನೀಡಲಾಗುವುದು.

ಅಲ್ಪಸಂಖ್ಯಾತರ ಅಭ್ಯರ್ಥಿಗಳ ಪೋಷಕರ ವಾರ್ಷಿಕ ಗರಿಷ್ಠ ವರಮಾನ ರೂ 6 ಲಕ್ಷಕ್ಕೆ ಮೀರಿರಬಾರದು. ಅಭ್ಯರ್ಥಿಗಳನ್ನು ಅರ್ಹತೆ, ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಈ ಪ್ರೋತ್ಸಾಹಧನ ಪಡೆಯುವ ವಿದ್ಯಾರ್ಥಿಗಳು ಭಾರತ ಸರ್ಕಾರ ಅಥವಾ ಇತರೆ ವಿದ್ಯಾರ್ಥಿವೇತನ/ಶಿಷ್ಯವೇತನ ಪಡೆಯಲು ಅರ್ಹರಿರುತ್ತಾರೆ. ಈ ಸೌಲಭ್ಯ ಪಡೆಯುವ ವಿದ್ಯಾರ್ಥಿಗಳು ಸರ್ಕಾರಿ/ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ನಿಯಮಾನುಸಾರ ಪ್ರವೇಶ ಪಡೆಯಲು ಅರ್ಹರಿರುತ್ತಾರೆ.

ವಿದ್ಯಾರ್ಥಿಗಳು ಡಿ.ಎಡ್ ಮತ್ತು ಬಿ.ಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸಿರುವ ಬಗ್ಗೆ ಎಲ್ಲಾ ಅಧಿಕೃತ ದಾಖಲಾತಿಗಳನ್ನು ಸಲ್ಲಿಸತಕ್ಕದ್ದು. ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಅರ್ಹತೆ ಪರೀಕ್ಷೆ/ಹಿಂದಿನ ಸಾಲಿನ ಪರೀಕ್ಷೆಯಲ್ಲಿ ಕನಿಷ್ಠ 50% ರಷ್ಟು ಅಂಕಗಳನ್ನು ಪಡೆದಿರತಕ್ಕದ್ದು.

ಉತ್ತೀರ್ಣರಾಗದ ಅಭ್ಯರ್ಥಿಗಳು ಪ್ರೋತ್ಸಾಹಧನ ಪಡೆಯಲು ಅರ್ಹರಾಗಿರುವುದಿಲ್ಲ. ಮೊದಲನೇ ವರ್ಷದಲ್ಲಿ ಪ್ರೋತ್ಸಾಹಧನ ಪಡೆದಿರುವ ಅಭ್ಯರ್ಥಿಗಳು ಎರಡನೇ ವರ್ಷಕ್ಕೆ ಪ್ರೋತ್ಸಾಹ ಧನ ಪಡೆಯಲು ಪ್ರತ್ಯೇಕ ಅರ್ಜಿ ಸಲ್ಲಿಸತಕ್ಕದ್ದು. ಸುಳ್ಳು ಮಾಹಿತಿ, ದಾಖಲಾತಿ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಿ ಪ್ರೋತ್ಸಾಹಧನ ಪಡೆದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೀಡಲಾದ ಪ್ರೋತ್ಸಾಹಧನ ಮೊತ್ತವನ್ನು ವಸೂಲಿ ಮಾಡಿ ಸರ್ಕಾರಕ್ಕೆ ಹಿಂದಿರುಗಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *