ಮಿಜೋರಾಂ ರಾಜ್ಯದ ರಾಜಧಾನಿ ಐಜ್ವಾಲ್‌ನಿಂದ 25 ಕಿಮೀ ದೂರದಲ್ಲಿರುವ ಸಾಯಿರಾಂಗ್ ಬಳಿಯ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದ್ದು, ಕನಿಷ್ಠ 17 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
“ಈ ದುರಂತದಿಂದ ತೀವ್ರ ದುಃಖ ಮತ್ತು ಬಾಧಿತವಾಗಿದೆ. ನಾನು ಎಲ್ಲಾ ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ” ಎಂದು ಮಿಜೋರಾಂ ಸಿಎಂ ಝೋರಮ್ ತಂಗಾ ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ, ಗಾಯಗೊಂಡವರಿಗೆ 50,000 ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ