ನಾಳೆ ಮುಂಜಾನೆ ಪ್ರಧಾನಿ ಮೋದಿ ಬೆಂಗಳೂರಿಗೆ ಆಗಮನ: ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್

ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ. ಹೆಚ್ ಎಎಲ್ ನಿಂದ‌ ನೇರವಾಗಿ ಇಸ್ರೋ ಕಚೇರಿಗೆ ಭೇಟಿ ನೀಡಿ ಅಲ್ಲಿನ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ.

ಪ್ರಧಾನಿ ಮೋದಿ ಅವರು ಇಸ್ರೋಗೆ ಭೇಟಿ ನೀಡಿ. ವಿಜ್ಞಾನಿಗಳ ಸಾಧನೆಗೆ ಪ್ರಶಂಸೆ ಮಾಡಲಿದ್ದಾರೆ. ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ಅವರ ರೋಡ್‌ ಶೋ ಇರಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ್‌ ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರು ನಾಳೆ ಬೆಳಗಿನ ಜಾವವೇ ಬೆಂಗಳೂರಿಗೆ ಆಗಮಿಸಲಿದ್ದು, ಮಧ್ಯರಾತ್ರಿ 2 ಗಂಟೆಯಿಂದಲೇ ನಗರದಲ್ಲಿ ಪೊಲೀಸ್‌ ಬಂದೋಬಸ್ತ್ ಇರಲಿದೆ. ಎಚ್ಎಎಲ್‌ನಿಂದ ಪೀಣ್ಯದ ಇಸ್ರೋ ಕಚೇರಿವರೆಗೂ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ.

Leave a Reply

Your email address will not be published. Required fields are marked *