ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.
ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆ ವಿದೇಶಿ ಪ್ರವಾಸ ಮುಗಿಸಿ ನೇರವಾಗಿ ಇಸ್ರೋಗೆ ಭೇಟಿ ನೀಡಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ.
ಇಸ್ರೋ ಮುಖ್ಯಸ್ಥ ಸೋಮನಾಥ್ರಿಂದ ವಿಕ್ರಮ್ ಲ್ಯಾಂಡರ್ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಣೆ, ಪ್ರಧಾನಿ ಮೋದಿಗೆ ವಿಕ್ರಂ ಲ್ಯಾಂಡರ್ ಮಾದರಿ, ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಸೆರೆ ಹಿಡಿದ ಫೋಟೋವನ್ನು ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾಯಿತು.
ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ಮೋದಿ.
ಆಗಸ್ಟ್ 23ರಂದು ಚಂದ್ರಯಾನ-3 ಯಶಸ್ವಿ ಲ್ಯಾಂಡಿಂಗ್ ಆದ ಹಿನ್ನೆಲೆ ಆ ದಿನವನ್ನು ಪ್ರತಿವರ್ಷ ರಾಷ್ಟ್ರೀಯ ಬಾಹ್ಯಾಕಾಶ ದಿನ (National Space Day) ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ.
ಯಾವುದೇ ಕೆಲಸವನ್ನು ಯಶಸ್ವಿಯಾಗಿ ಮಾಡಲು ನಮಗೆ ಶಕ್ತಿಯ ಆಶೀರ್ವಾದ ಬೇಕು ಮತ್ತು ನಮ್ಮ ಆ ಶಕ್ತಿಯೇ ನಮ್ಮ ‘ನಾರಿ ಶಕ್ತಿ.’ ಚಂದ್ರಯಾನ-3 ಮಿಷನ್‌ನಲ್ಲಿ ನಮ್ಮ ಮಹಿಳಾ ವಿಜ್ಞಾನಿಗಳು ಪ್ರಮುಖ ಪಾತ್ರ ವಹಿಸಿರುವುದನ್ನು ನೀವೆಲ್ಲರೂ ನೋಡಿದ್ದೀರಿ. ಈ ಶಿವಶಕ್ತಿ ಅಂಶವು ಮುಂದಿನ ಪೀಳಿಗೆಯನ್ನು ಮಾನವೀಯತೆಯ ಕಲ್ಯಾಣಕ್ಕಾಗಿ ಪ್ರೇರೇಪಿಸುತ್ತದೆ ಆದ ಕಾರಣ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ‘ ಎಂದು ಹೆಸರಿಡೋಣ ಎಂದರು.