ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಅಪಘಾತ: ಬೈಕ್ ಸವಾರನ ಕುತ್ತಿಗೆಯ ಮೇಲೆ ಹರಿದ ಟ್ರ್ಯಾಕ್ಟರ್: ಸ್ಥಳದಲ್ಲೇ ಬೈಕ್ ಸವಾರ ಸಾವು

ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ‌ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಪಸಿಹಳ್ಳಿ ಸಮೀಪ ಸೋಮವಾರ ರಾತ್ರಿ ಸಂಭವಿಸಿದೆ.

ಬೈಕ್ ಸವಾರ ಮಂಜುನಾಯ್ಕ(26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಚಕ್ರ ಬೈಕ್ ಸವಾರನ‌ ಕುತ್ತಿಗೆಯ ಮೇಲೆ ಹರಿದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೋಲಿಸರು ಭೇಟಿ‌ ನೀಡಿ, ಪರಿಶೀಲಿಸಿದರು. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *