ಇಂದು ಮಧ್ಯಾಹ್ನ ಸುರಿದ ಮಳೆಗೆ ತಾಲೂಕು ಕಚೀರಿ ಎದುರಿನ ಚರಂಡಿಗಳು ಉಕ್ಕಿ ಹರಿದ ಪರಿಣಾಮ ಚರಂಡಿ ನೀರು ರಸ್ತೆಗೆ ಹರಿದಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
ಮಳೆ ಮುನ್ಸೂಚನೆ ಇದ್ದರೂ ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದಿರುವುದು ಈ ಅವಾಂತರಕ್ಕೆ ಕಾರಣವಾಗಿದೆ.
ಚರಂಡಿ ನೀರು ಸರಾಗವಾಗಿ ಹರಿದು ಹೋಗದಿರುವುದು ಸೇರಿದಂತೆ ಮ್ಯಾನ್ ಹೋಲ್ ಗಳು ಉಕ್ಕಿ ಹರಿದ ಪರಿಣಾಮ ರಸ್ತೆಯಲ್ಲಿ ಸಂಚರಿಸುವವರು ದುರ್ವಾಸನೆಗೆ ಹಿಡಿಶಾಪ ಹಾಕಿದರು.