ನೋಂದಾಯಿತ ಕಾರ್ಮಿಕ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ, ಮಂಡಳಿಯ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಗಳನ್ನು ನೀಡಲಾಗುತ್ತಿದೆ.

ಕಾರ್ಮಿಕ ಅಧಿಕಾರಿಗಳ ಕಛೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ನೈಜ ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಕಾರ್ಮಿಕ ಅಧಿಕಾರಿಗಳ ಕಚೇರಿ /ಕಾರ್ಮಿಕ ನಿರೀಕ್ಷಕರ ಕಚೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ದಿನಾಂಕ:16-09-2023 ರಂದು ಅಂತಿಮ ದಿನವಾಗಿರುತ್ತದೆ. ತದನಂತರ ಬರುವ ಅರ್ಜಿಗಳನ್ನ ಸ್ವೀಕರಿಸುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಉಪ ವಿಭಾಗ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಸೋಮೇಶ್ವರ ಬಡಾವಣೆ, ದೊಡ್ಡಬಳ್ಳಾಪುರ ಅಥವಾ ಕಾರ್ಮಿಕ ನಿರೀಕ್ಷಕರ ಕಛೇರಿ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ, ನೆಲಮಂಗಲ ಇವರ ಕಚೇರಿಗಳನ್ನು ಸಂಪರ್ಕಿಸಬಹುದಾಗಿರುತ್ತದೆ.

ಈ ಯೋಜನೆ ಸೌಲಭ್ಯ ಪಡೆಯಲು ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಗುರುತಿನ ಚೀಟಿ, 2023-24 ನೇ ಸಾಲಿನಲ್ಲಿ ಪ್ರಥಮ ಅಥವಾ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ ವ್ಯಾಸಂಗ ಪ್ರಮಾಣ ಪತ್ರ, ಎಸ್. ಎಸ್. ಎಲ್. ಸಿ. ಪರೀಕ್ಷೆಯ ದೃಢೀಕೃತ ಅಂಕಪಟ್ಟಿ, ಯಾವುದೇ ಸರ್ಕಾರಿ ಯೋಜನೆಯಡಿ ಇದುವರೆಗೂ ಲ್ಯಾಪ್ ಟಾಪ್ ಪಡೆದಿರುವುದಿಲ್ಲ ಎಂಬ ಬಗ್ಗೆ ಸ್ವಯಂ ದೃಢೀಕರಣ ಪತ್ರ ಸಲ್ಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹೆಚ್.ಆರ್. ನಾಗೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

4 thoughts on “ನೋಂದಾಯಿತ ಕಾರ್ಮಿಕ ಮಕ್ಕಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಅರ್ಜಿ ಆಹ್ವಾನ

Leave a Reply

Your email address will not be published. Required fields are marked *