18ನೇ ಜಿ20 ಶೃಂಗಸಭೆಗಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಶುಕ್ರವಾರ ಸಂಜೆ ದೆಹಲಿಗೆ ವಿಶೇಷ ವಿಮಾನದಲ್ಲಿ ಬಂದಿಳಿದರು. ಬೈಡನ್ ಅವರನ್ನು ನಾಗರಿಕ ವಿಮಾನಯಾನ ರಾಜ್ಯ ಖಾತೆ ಸಚಿವ ಜನರಲ್ (ನಿವೃತ್ತ) ವಿಕೆ ಸಿಂಗ್ ಅವರು ಬರಮಾಡಿಕೊಂಡರು.
ಅಮೆರಿಕ ಅಧ್ಯಕ್ಷ ಬೈಡನ್ ಅವರು ಪ್ರಧಾನಿ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ನಡೆಸಿದರು.
ನಾಳೆಯಿಂದ 18ನೇ G20 ಶೃಂಗಸಭೆಯನ್ನು ನವದೆಹಲಿಯಲ್ಲಿ ಆಯೋಜಿಸಲಾಗಿದೆ. 25ಕ್ಕೂ ಹೆಚ್ಚು ವಿಶ್ವ ನಾಯಕರು ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.