ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಬೀರಸಂದ್ರದ ಜಿಲ್ಲಾಡಳಿತವ ಭವನದಲ್ಲಿ ಈ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಲು ಬಂದ ಸಚಿವರು ಆತ್ಮೀಯವಾಗಿ ಬರ ಮಾಡಿಕೊಂಡ ಬೆಂಗಳೂರು ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಮುಖಂಡರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ತಾಲೂಕಿನಲ್ಲಿ ಕುಂಠಿತಗೊಂಡಿರುವ ಲೋಕೋಪಯೋಗಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಬೆಂಗಳೂರಿನಿಂದ ನಂದಿಬೆಟ್ಟಕ್ಕೆ ಹೋಗುವವರು ಹೆಚ್ಚಿನದಾಗಿ ಕುಂದಾಣ ವೃತ್ತ, ಚಪ್ಪರದಕಲ್ಲು, ಅರುವನಹಳ್ಳಿ, ರಾಮನಾಥಪುರ, ರಬ್ಬನಹಳ್ಳಿ, ಹೆಗ್ಗಡಿಹಳ್ಳಿ ರಸ್ತೆಗಳನ್ನು ಬಳಸುತ್ತಿರುವುದರಿಂದ ರಸ್ತೆ ಹಾಳಾಗಿ, ವಾಹನ ದಟ್ಟಣೆ ಹೆಚ್ಚಾಗಿದೆ, ಹಳ್ಳಿಗರಿಗೆ ತೀವ್ರ ತೊಂದರೆ ಆಗಿದೆ. ಇದರಿಂದ ರಸ್ತೆ ಅಗಲೀಕರಣ, ರಸ್ತೆ ದುರಸ್ತಿ ಮಾಡುವಂತೆ ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು.
ದಂಡುದಾಸ ಕೊಡಿಗೆಹಳ್ಳಿಯಿಂದ ಮೆಳೇಕೋಟೆ ರಸ್ತೆ, ಬೀಡಿಗೆರೆ ಗೇಟ್ ಯಿಂದ ದಂಡುದಾಸ ಕೊಡಿಗೆಹಳ್ಳಿವರೆಗಿನ ರಸ್ತೆಗಳಿಗೆ ಜಲ್ಲಿಕಲ್ಲು ಹಾಕಿ ಹಾಗೇ ಬಿಡಲಾಗಿದೆ ಆ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಮಾಡಲಾಗಿದೆ ಎಂದರು.
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಜಿಲ್ಲಾಧಿಕಾರಿ ಡಾ.ಎನ್.ಶಿವಂಶಕರ್, ಅಪರ ಜಿಲ್ಲಾಧಿಕಾರಿ, ತಾ.ಪಂ ಇಒ, ಸುಬ್ರಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.