ಅತಿವೇಗವಾಗಿ ಬಂದ ಬಂದ ಬೈಕ್: ವಿದ್ಯುತ್ ಕಂಬಕ್ಕೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಅತಿವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ನೇರವಾಗಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಬೈಕ್ ಸವಾರನಿಗೆ ಗಂಭೀರವಾಗಿ ಗಾಯಗಳಾಗಿರೋ ಘಟನೆ ತಾಲೂಕಿನ ವಡ್ಡರಹಳ್ಳಿ ಬಳಿ ಇಂದು ಸಂಜೆ ನಡೆದಿದೆ.

ಡಿಕ್ಕಿ ರಭಸಕ್ಕೆ ಬೈಕ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡಿದ್ದ ಬೈಕ್ ಸವಾರನನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಟನಕುಂಟೆ ಗ್ರಾಮದ ಯುವಕ ಅಜ್ಜಿಯ ಊರಾದ ತಿರುಮನಗೊಂಡನಹಳ್ಳಿ ಗ್ರಾಮಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ ಎಂದು ಮಾಹಿತಿ ತಿಳಿದುಬಂದಿದೆ. ಹಿಂಬದಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ಯಿಯಲ್ಲಿ ಘಟನೆ ಸಂಭವಿಸಿದೆ.

Leave a Reply

Your email address will not be published. Required fields are marked *