ತಮಿಳುನಾಡಿಗೆ ದಿನನಿತ್ಯ 5ಸಾವಿರ ಕ್ಯೂಸೆಕ್ ಕಾವೇರಿ ನೀರನ್ನ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನಕ್ಕೆ ಅಸಮಾಧಾನ ವ್ಯಕ್ತಪಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡರ ಬಣದ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದ ಬಳಿ ಇಂದು ಸಾಂಕೇತಿಕವಾಗಿ ಕಾವೇರಿ ನಿರ್ವಾಹಣಾ ಪ್ರಾಧಿಕಾರ ಪ್ರತಿಕೃತಿಯನ್ನು ಸುಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ವೈಫಲ್ಯದಿಂದ ನಮ್ಮ ರಾಜ್ಯಕ್ಕೆ ಗೋರ ಅನ್ಯಾಯವಾಗಿದೆ ಎಂದು ಆರೋಪಿಸಿ ಕಾವೇರಿ ನಿರ್ವಾಣ ಪ್ರಾಧಿಕಾರ, ರಾಜ್ಯ, ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶವ್ಯಕ್ತಪಡಿಸಲಾಯಿತು.
ಈ ವೇಳೆ ರಾಜ್ಯ ಉಪಾಧ್ಯಕ್ಷ ಪುಟ್ಟೇಗೌಡ, ರಾಜ್ಯ ಮಹಿಳಾ ಉಪಾಧ್ಯಕ್ಷೆ ಅನ್ನಪೂರ್ಣ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಪುರುಷೋತ್ತಮ ಗೌಡ ಸೇರಿದಂತೆ ತಾಲೂಕು ಕರವೇ ಕಾರ್ಯಕರ್ತರು ಭಾಗಿಯಾಗಿದ್ದರು.