ಕಾಲುಬಾಯಿ ರೋಗ ಲಸಿಕೆ: ನಾಲ್ಕನೇ ಸುತ್ತಿನ ಅಭಿಯಾನಕ್ಕೆ ಚಾಲನೆ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ  ದೇವನಹಳ್ಳಿಯ ಪಶು ಆಸ್ಪತ್ರೆ ಬಳಿ ಏರ್ಪಡಿಸಲಾಗಿದ್ದ 4 ನೇ ಸುತ್ತಿನ ಉಚಿತ ಕಾಲು ಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಅಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಫಲಾನುಭವಿ ರೈತರಿಗೆ 2 ಹೆಚ್.ಪಿ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ ಮತ್ತು 02 ನೆಲಹಾಸು(ರಬ್ಬರ್ ಮ್ಯಾಟ್)ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ಎನ್, ತಹಶೀಲ್ದಾರ್ ಶಿವರಾಜ್, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *