ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ ತಂಡವು 5-1 ಅಂತರದಿಂದ ಗೆಲುವು ಸಾಧಿಸಿ ಸ್ವರ್ಣ ಪದಕ ಗೆದ್ದು ಇತಿಹಾಸ ಸೃಷ್ಟಿಸಿದೆ.
ಭಾರತ ತಂಡವು ನಾಲ್ಕನೇ ಬಾರಿ ಏಷ್ಯನ್ ಗೇಮ್ಸ್ ಚಿನ್ನವನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವು ಸಾಧಿಸುವ ಮೂಲಕ 2024ರಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದುಕೊಂಡಿದೆ.