ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಕೇಂದ್ರ ಚುನಾವಣಾ ಆಯೋಗ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.
ಮಿಜೋರಾಂ ನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್ ಘಡದಲ್ಲಿ ನವೆಂಬರ್ 7 ಮತ್ತು 17ರಂದು 2 ಹಂತದಲ್ಲಿ ಮತದಾನ ನಡೆಯಲಿದೆ. ಉಳಿದಂತೆ ಮಧ್ಯಪ್ರದೇಶದಲ್ಲಿ ನವೆಂಬರ್ 17ರಂದು, ರಾಜಸ್ಥಾನದಲ್ಲಿ ನವೆಂಬರ್ 23ರಂದು ಮತ್ತು ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ. ಎಲ್ಲ ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ. ಎಂದು ಕೇಂದ್ರ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ನಕ್ಸಲ್ ಸಂಘರ್ಷ ಪೀಡಿತ ಛತ್ತೀಸ್ ಘಡದಲ್ಲಿ ಮಾತ್ರ 2 ಹಂತದಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ಯೋಜಿಸಿದೆ.