ಉಚಿತ ಬ್ರೈಲ್ ಕಿಟ್ ವಿತರಣೆಗಾಗಿ ಅಂಧ ವಿಕಲಚೇತನರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣವನ್ನು ಹೊಂದಲು ಅನುಕೂಲವಾಗುವಂತೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಉಚಿತವಾಗಿ ಬ್ರೈಲ್‌ ಕಿಟ್ ನೀಡಲಾಗುವುದು.

ಅರ್ಜಿ ನಮೂನೆಯನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿ.ಆರ್.ಡಬ್ಲೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಂ.ಆರ್.ಡಬ್ಲೂ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆದು ಅ. 25ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕಾಗಿದೆ.

ಷರತ್ತುಗಳು

1.ಅಂಧ ವ್ಯಕ್ತಿಗಳು ಭಾರತದ ಪ್ರಜೆಯಾಗಿರಬೇಕು ಮತ್ತು ಕರ್ನಾಟಕದಲ್ಲಿ ಕನಿಷ್ಟ 10 ವರ್ಷಗಳು ವಾಸವಾಗಿರುವ ಬಗ್ಗೆ ತಹಸೀಲ್ದಾರರಿಂದ ವಾಸಸ್ಥಳ ದೃಢೀಕರಣ ಪತ್ರ ಪಡೆದು ಪ್ರತಿ ಸಲ್ಲಿಸುವುದು.

2.ಎಸ್.ಎಸ್.ಎಲ್.ಸಿ ಹಾಗೂ ನಂತರದ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಮಾತ್ರ ಬ್ರೈಲ್‌ಕಿಟ್ ನೀಡುವುದು.

3.ಬ್ರೈಲ್‌ಕಿಟ್ ಪಡೆಯುವ ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜು /ಸಂಸ್ಥೆಯ ಮಖ್ಯಸ್ಥರಿಂದ ದೃಢೀಕರಣ ಶಿಫಾರಸ್ಸಿನೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು.

4.ಈ ಯೋಜನೆಯ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿ ಇರುವುದಿಲ್ಲ.

5.ಸರ್ಕಾರ ನೀಡುವ ಬ್ರೈಲ್‌ಕಿಟ್ ಅನ್ನು ಯಾವುದೇ ಕಾರಣಕ್ಕೆ ಪರಬಾರೆ ಮಾಡಬಾರದು ಮಾಡಿದ್ದು ಕಂಡುಬಂದಲ್ಲಿ ಅಂತವರ ಮೇಲೆ ಕ್ರಮ ಜರುಗಿಸಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

6.ಬ್ರೈಲ್‌ಕಿಟ್ ಅನ್ನು ಪಡೆಯುವ ವಿದ್ಯಾರ್ಥಿಯು ರೂ.100/- ಗಳ ಛಾಪ ಕಾಗದದಲ್ಲಿ ಮುಚ್ಚಳಿಕೆ ಬರೆದು ಕೊಡುವುದು.

7.ಬ್ರೈಲ್‌ಕಿಟ್ ಅನ್ನು ಪಡೆಯುವ ವಿದ್ಯಾರ್ಥಿಯು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಸಲ್ಲಿಸುವುದು.

8.ಈ ಸೌಲಭ್ಯವನ್ನು ಪಡೆಯುವ ವಿಕಲಚೇತನ ವಿದ್ಯಾರ್ಥಿಗಳು ಶೇಕಡ 40% ಕ್ಕಿಂತ ಹೆಚ್ಚು ದೃಷ್ಟಿ ದೋಷವುಳ್ಳವರಾಗಿರಬೇಕು.

9.ಅರ್ಜಿ ಸಲ್ಲಿಸುವ ವಿಕಲಚೇತನ ವಿದ್ಯಾರ್ಥಿಗಳು ವಿಕಲಚೇತನ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಕಾರ್ಡ್ ಪ್ರತಿ ಕಡ್ಡಾಯವಾಗಿ ಸಲ್ಲಿಸುವುದು.

10.ಬ್ರೈಲ್‌ಕಿಟ್ ಅನ್ನು ವಿದ್ಯಾರ್ಥಿಗಳು ಶಿಕ್ಷಣದ ಸಲುವಾಗಿಯೇ ಉಪಯೋಗಿಸತಕ್ಕದ್ದು.

11.ಬ್ರೈಲ್‌ಕಿಟ್ ಅನ್ನು ಒಂದು ವಿದ್ಯಾರ್ಥಿಗೆ ಜೀವಿತ ಕಾಲದಲ್ಲಿ ಒಂದು ಬಾರಿ ಮಾತ್ರ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಬೇರೆ ಇಲಾಖೆಗಳು ಅಥವಾ ಸಂಘ ಸಂಸ್ಥೆಗಳಿಂದ ಲ್ಯಾಪ್ ಟಾಪ್ ಅನ್ನು ಪಡೆದಿದ್ದಲ್ಲಿ ಅಂತಹವರು ಅರ್ಹರಾಗಿರುವುದಿಲ್ಲ.

12.ಬ್ರೈಲ್‌ಕಿಟ್ ಅನ್ನು ಸ್ವೀಕರಿಸಿರುವ ಅರ್ಜಿಗಳ ಜೇಷ್ಠತೆ ಅನುಸಾರ ವಿತರಿಸಲಾಗುವುದು.

ನಿಯತ ಕಾಲಿತ ವಿದ್ಯಾರ್ಥಿಗಳು ಮಾತ್ರ ಮೇಲಿನ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಯನ್ನು ವಿಕಲಚೇತನರ ಸಹಾಯವಾಣಿ ಸಂಖ್ಯೆ 080-29787441 ಗೆ ಕರೆ ಮಾಡಬಹುದು ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ಜಿಲ್ಲಾಡಳಿತ ಭವನ, ನಂ.03 ನೆಲಮಹಡಿ ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ವಿಳಾಸವನ್ನು ಸಂಪರ್ಕಿಸಬಹುದು  ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್‌.ಎಂ ಅವರು‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *