ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ವೈಭವ ವಾರ್ಷಿಕೋತ್ಸವ

ಗೋಕಾಕ್ ಹೋರಾಟದ ಸಮಯದಲ್ಲಿ ನಮ್ಮ ಶಿಕ್ಷಣ ಸಂಸ್ಥೆಗೆ ಆಂಗ್ಲ ಮಾಧ್ಯಮಕ್ಕೆ ಅನುಮತಿ ದೊರೆತಿದೆ. 1981ರಲ್ಲಿ ಆರಂಭವಾದ ಶಿಕ್ಷಣ ಸಂಸ್ಥೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆ ಮತ್ತು ಶಿಕ್ಷಣದ ಗುಣಮಟ್ಟದ ಹೆಚ್ಚಿಸಿಕೊಳ್ಳುತ್ತಿರುವುದರಿಂದ ಪೋಷಕರು ಕೂಡ ನಮ್ಮ ಶಿಕ್ಷಣ ಸಂಸ್ಥೆ ಮೇಲೆ ವಿಶ್ವಾಸ ಇರಿಸಿದ್ದಾರೆ ಎಂದು  ಶಾಲಾ ಕಾರ್ಯದರ್ಶಿ ಪುರುಷೋತ್ತಮ ಅವರು ಹೇಳಿದರು

ನಗರದ ನಿವೇದಿತಾ ಆಂಗ್ಲ ಶಾಲೆಯಲ್ಲಿ ಶುಕ್ರವಾರ 2022-23 ನೇ ಸಾಲಿನ ವಾರ್ಷಿಕೋತ್ಸವ ಮತ್ತು ಎಸ್ಎಸ್ಎಲ್ ಸಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿ ಅವರು ಮಾತನಾಡಿದರು.

ಶಿಕ್ಷಣ ಸಂಸ್ಥೆಗಳು ಮಕ್ಕಳಿಗೆ ವಿದ್ಯಾರ್ಜನೆ ನೀಡುವ ದೇವಾಲಯಗಳು ಆಗಬೇಕೆ ಹೊರತು ಕೇವಲ ಪೋಷಕರಿಂದ ಶುಲ್ಕ ವಸೂಲಿ ಕೇಂದ್ರಗಳಾಗಬಾರದು. ಶಿಕ್ಷಣ ಅತ್ಯುತ್ತಮ ಸೇವೆಯಾಗಿದೆ. ಅದು ವ್ಯಾಪಾರದ ಸರಕಾಗಬಾರದು ಎಂದು ನಿವೃತ್ತ ಎಸಿಪಿ ಸುಬ್ಬಣ್ಣ ತಿಳಿಸಿದರು.

ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ಅನೇಕ ಮಂದಿ ಎಲ್ಲಾ ಕ್ಷೇತ್ರಗಳಲ್ಲಿಯೂ ಉನ್ನತ ಹುದ್ದೆಯಲ್ಲಿದ್ದಾರೆ. ಸುಮಾರು 40ಕ್ಕೂ ಹೆಚ್ಚು ವರ್ಷಗಳಿಂದ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವ ಮುಖಾಂತರ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿಯೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡುರುವುದು ಹೆಮ್ಮೆಯ ವಿಷಯ. ಇದಕ್ಕೆ ಸಾಕ್ಷಿ ಪ್ರತಿವರ್ಷ ಶಾಲೆಯ ಎಸ್ಎಸ್ಎಲ್ ಫಲಿತಾಂಶವೇ ಆಗಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ ಸಿಯಲ್ಲಿ  ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

Leave a Reply

Your email address will not be published. Required fields are marked *