ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Leave a Reply

Your email address will not be published. Required fields are marked *