ವಾಘ್ ಬಕ್ರಿ ಟೀ ಗ್ರೂಪ್ನ ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ (49) ಬೀದಿನಾಯಿಗಳ ದಾಳಿಗೆ ತುತ್ತಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ವಾರ ಅಹಮದಾಬಾದ್ನಲ್ಲಿರುವ ತಮ್ಮ ನಿವಾಸದ ಬಳಿ ಬೀದಿ ನಾಯಿಗಳ ದಾಳಿಗೆ ಸಿಲುಕಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ದೇಸಾಯಿ ಮೆದುಳಿನ ರಕ್ತಸ್ರಾವಕ್ಕೆ ಒಳಗಾಗಿದ್ದರು ಎಂದು ವರದಿಯಾಗಿತ್ತು. ತಲೆಗೆ ತೀವ್ರ ಪೆಟ್ಟಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನಪ್ಪಿದ್ದಾರೆ ಎನ್ನಲಾಗಿದೆ.
“ನಮ್ಮ ಪ್ರೀತಿಯ ಪರಾಗ್ ದೇಸಾಯಿ ಅವರ ದುಃಖದ ನಿಧನವನ್ನು ತೀವ್ರ ದುಃಖದಿಂದ ತಿಳಿಸಲು ನಾವು ವಿಷಾದಿಸುತ್ತೇವೆ” ಎಂದು ಕಂಪನಿಯು ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.
ಅದೇ ರೀತಿ ಪರಾಗ್ ದೇಸಾಯಿ ಅವರ ಸಾವಿಗೆ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಗುಜರಾತ್ ಕಾಂಗ್ರೆಸ್ ನಾಯಕ ಶಕ್ತಿ ಸಿನ್ ಗೋಹಿಲ್ , ‘ಇದು ತುಂಬ ದುಃಖದ ಸುದ್ದಿಯಾಗಿದೆ. ಮೆದುಳು ರಕ್ತಸ್ರಾವದಿಂದ ವಾಫ್ ಬಕ್ರಿ ಟೀ ಗ್ರೂಪ್ನ ಮಾಲೀಕ ಮತ್ತು ನಿರ್ದೇಶಕ ಪರಾಗ್ ದೇಸಾಯಿ ಅವರು ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಹೇಳಿದ್ದಾರೆ.